ನನ್ನ ಕಿತಾಪತಿಗಳ ಜಗತ್ತು…
October 14, 2010
ಪ್ರಜಾಪ್ರಭುತ್ವ ಕೊಟ್ಟ ಕೊಡುಗೆಯು, ಬಹುಪರಾಕ್, ಮುದ್ರಣ ಮಾಧ್ಯಮ, ವಿಚಾರ donkey, horse trading, vijay karnataka 2 Comments
October 12, 2010
ಕಂಬನಿ, ಪ್ರಜಾಪ್ರಭುತ್ವ ಕೊಟ್ಟ ಕೊಡುಗೆಯು, ಬಹುಪರಾಕ್, Media editorial, vijay karnataka 3 Comments
August 10, 2010
ಮುಕ್ತ...ಮುಕ್ತ...ಮುಕ್ತ.... padabandha, TNS, vijay karnataka, vijaya bandha 2 Comments
March 31, 2010
ನಿಮಗಿದೋ ಆಮಂತ್ರಣ radhakrishna bhadti, vijay karnataka, water Leave a comment
January 3, 2010
Media aditya bharadwaj, g n mohan, media mirchi, sughosh s nigale, vijay karnataka Leave a comment
ನಿನ್ನೆ ಅಂದರೆ ಶನಿವಾರ ‘ವಿಜಯ ಕರ್ನಾಟಕ’ದಲ್ಲಿ ಶ್ರಿ. ಜಿ. ಎನ್. ಮೋಹನ್ ಅವರು ಮೀಡಿಯಾ ಮಿರ್ಚಿ ಅಂಕಣದಲ್ಲಿ “ಈ ದೇಹದಿಂದ ದೂರವಾದೆ ಏಕೆ ಆತ್ಮನೆ?” ಎಂದು ಬರೆದಿದ್ದರು. ಅದರಲ್ಲಿ ನನ್ನ ಕುರಿತು ಹೀಗಿತ್ತು.
ಈ ಅಂಕಣ ಓದಿದ ಬೆಂಗಳೂರು ವಿಶ್ವವಿದ್ಯಾನಿಲಯದ ಮಾಧ್ಯಮ ವಿದ್ಯಾರ್ಥಿ ಹಾಗೂ ಈಗಾಗಲೇ ಹಲವು ಲೇಖನಗಳನ್ನು ಬರೆದು ಭರವಸೆ ಮೂಡಿಸಿರುವ ವಿದ್ಯಾರ್ಥಿ ಪತ್ರಕರ್ತ ಆದಿತ್ಯ ಭಾರದ್ವಾಜ್ ನನಗೆ ಕಳಿಸಿದ ಎಸ್ಎಂಎಸ್ ಇಲ್ಲಿದೆ.
“ಹಲೋ ಸರ್. ಇಂದಿನ ಮೀಡಿಯಾ ಮಿರ್ಚಿ ಓದಿದೆ. ತುಂಬ ಸಮಯೋಚಿತವಾದ ಚಾಟಿ ಏಟು. ಮೊನ್ನೆ ಮೊದಲ ಬಾರಿಗೆ ಪ್ರೋ. ಅಶೋಕ್ ಕುಮಾರ್ ಪರ್ಮಿಷನ್ ಪಡೆದು ಅಶ್ವತ್ಥ್ ಮತ್ತು ವಿಷ್ಣು ಅವರ ಸಾವಿನ ಕವರೇಜಿಗೆಂದು ಕ್ಯಾಮೆರಾ ಹಿಡಿದು ಹೋಗಿದ್ದೆ. ನನಗೋ ಆ ಸಾವಿನ ಮನೆಯಲ್ಲಿ ಬೈಟ್ ಗಾಗಿ ಯಾರ ಮುಂದೆ ಮೈಕ್ ಹಿಡಿಯಲೂ ಏನೋ ಅರಿಯದ ಮುಜುಗರ. ಆದರೆ ಅಲ್ಲಿದ್ದ ಇತರ ಚ್ಯಾನಲ್ ಪತ್ರಕರ್ತರಿಗೆ ನನ್ನ ಮುಜುಗರ ಹಾಸ್ಯದ ವಸ್ತುವಾಗಿತ್ತು. ಆಶ್ಚರ್ಯ ಅಂದ್ರೆ ಕ್ಯಾಮೆರಾ ಮುಂದೆ ನಿಂತು ಮಾತನಾಡುತ್ತಿದ್ದ ಅವರ ಆಪ್ತರಲ್ಲೇ ಆ ಮುಜುಗರ ಇರಲಿಲ್ಲ. For me it was a good experience and education. I think the camera is the culprit. It has made us a society insensitive”.
August 9, 2009
ಮುದ್ರಣ ಮಾಧ್ಯಮ my print articles, name, sughosh, vijay karnataka Leave a comment
ಇಂದಿನ ವಿಜಯ ಕರ್ನಾಟಕದ ಸಾಪ್ತಾಹಿಕ ವಿಜಯದ ಹೆಸರು ಕ್ರಾಂತಿ ವಿಭಾಗದಲ್ಲಿ ಪ್ರಕಟವಾಗಿರುವ ನನ್ನ ಲೇಖನ, ನನ್ನ ಹೆಸರಿನ ಹಿಂದಿನ ಕಥೆ ಹೇಳುತ್ತದೆ.

July 30, 2009
ಮುದ್ರಣ ಮಾಧ್ಯಮ my print article, teeth, vijay karnataka 3 Comments

ಪ್ರೀತಿಯ ಹಲ್ಲೇ…,
ಹೌದು ನಿನಗೆ ಹಲ್ಲು ಅಂತಲೇ ಕರೆಯಬೇಕು. ಯಾವ ಹಲ್ಲು ಎಂದು ಕೇಳಿದರೆ ನನ್ನ ಬಳಿ ಉತ್ತರವಿಲ್ಲ. ಏಕೆಂದರೆ ನಾನು ನಿಮಗೆ ಇದುವರೆಗೆ ಹೆಸರೇ ಇಟ್ಟಿಲ್ಲ. ಹಾಗೇನಾದರು ಆದರೆ ನಾನು ನಿಮಗೆ ೩೨ ಹೆಸರು ಹುಡುಕಬೇಕು. ಹುಡುಕುವುದೇನು ದೊಡ್ಡ ಕೆಲಸವಲ್ಲ. ಆದರೆ ಯಾಕೋ ನಿಮಗೆ ಹೆಸರಿಡಲು ನನಗೆ ಹೊಳೆಯಲೇ ಇಲ್ಲ. ನನ್ನಲ್ಲಿ ಕಣ್ಣು, ಕಿವಿ, ಮೂಗು, ಕೈ, ಕಾಲು, ಹೊಟ್ಟೆ ಹೀಗೆ ಪ್ರತಿಯೊಂದು ಅಂಗಕ್ಕೆ ಅವರದೇ ಆದ identity ಇದೆ. ಆದರೆ ನಿಮಗೆ ನೀವೆಲ್ಲರೂ ಸೇರಿ ‘ ಹಲ್ಲುಗಳು’, ಅಷ್ಟೇ. ಕೆಲವರಿಗೆ ದವಡೆ, ಕೋರೆ ಎಂಬ ಹೆಸರಿದ್ದರೂ ನೀವು ಯಾವ ದವಡೆ ಯಾವ ಕೋರೆ ಎಂಬುದಕ್ಕೆ ಕೆರೆದುಕೊಳ್ಳಬೇಕಾಗುತ್ತದೆ. ತಲೆಯನ್ನು. ಹೀಗಿದ್ದೂ ನಿನಗೆ ಡಾ. ತ್ರಿವಿಕ್ರಂ ಹೆಸರಿಟ್ಟಿದ್ದು, ಸೆಕಂಡ್ ಫ್ರೊಂ ದಿ ರೈಟ್ ಟಾಪ್.
ಅಂತೂ ನನ್ನ ನಿನ್ನ ಇಷ್ಟು ವರ್ಷಗಳ ಸಂಬಂಧ ಮುಗಿದಿದೆ. ನೀನು ಹುಟ್ಟಿದಾಗ ಬಹುಶಃ ನನಗೆ ಮೂರೋ ನಾಲ್ಕೋ ವರ್ಷವಿರಬೇಕು. ಆದರೆ ನಿನ್ನಾಣೆಗೂ ನೀನು ಹುಟ್ಟಿದ್ದು ನನಗೆ ತಿಳಿಯಲಿಲ್ಲ. ಎದುರಿನ ಕೆಲವು ಹಲ್ಲುಗಳನ್ನು ಬಿಟ್ಟರೆ, ಒಳಗಿನ ಹಲ್ಲುಗಳಿಗೆ ನನಗೆ ಸಂಬಂಧವೇ ಇರಲಿಲ್ಲ. Actually, ಒಳಗಿನ ಹಲ್ಲುಗಳೇ ಎಲೆ ಮರೆಯ ಕಾಯಿಯ ಹಾಗೆ ಗಿರಣಿಯಂತೆ ಕರಕರ ದುಡಿಯುತ್ತಿದ್ದರೂ ಅವು ನನ್ನ ಬದುಕಿನಲ್ಲಿ ಯಾವುದೇ ಭಾವನಾತ್ಮಕ ಅಸ್ತಿತ್ವ ಹೊಂದಿರಲೇ ಇಲ್ಲ.
ಆದರೆ ಈಗ ನಿಮ್ಮಗಳ imporatance ಗೊತ್ತಾಗುತ್ತಿದೆ. ಡಾ. ತ್ರಿವಿಕ್ರಂ ತಮ್ಮ ಗೌಸ್ ಹಾಕಿದ ಕೈಗಳಲ್ಲಿ ಇಕ್ಕಳ ಹಿಡಿದು ನಿನ್ನನ್ನು ನನ್ನಿಂದ ಬೇರ್ಪಡಿಸಿ ರಕ್ತಸಿಕ್ತವಾಗಿದ್ದ ನಿನ್ನ ದೇಹವನ್ನು ‘ಕಣ್’ ಎಂದು ಟ್ರೇಯಲ್ಲಿ ಹಾಕಿದಾಗ ನನ್ನ ಕಣ್ಣು ತುಂಬಿ ಬಂದಿತ್ತು. ನೋವಿನಿಂದ ಹೀಗಾಗಿದೆ ಎಂದು ಡಾ. ತ್ರಿವಿಕ್ರಂ ಅಂದುಕೊಂಡಿರಬೇಕು. ಆದರೆ ಅವರಿಗೇನು ಗೊತ್ತು, ನನ್ನ ನಿನ್ನ ಅಗಲಿಕೆಯ ದುಃಖ.
ನನ್ನ ನಿನ್ನ ಸಂಬಂಧ ಸುಮಾರು ೨೪-೨೫ ವರ್ಷಗಳದ್ದು ಅಲ್ಲವೇ? ಇಷ್ಟು ವರ್ಷ ನೀನು ನನ್ನೋಡನಿದ್ದೆ . ಆದರೆ ನಿನ್ನ ಇರುವಿಕೆ ಗೊತ್ತಗುತ್ತಿದ್ದುದು ಮಾತ್ರ ಕೆಲವೇ ಕೆಲವು ಸಂದರ್ಭಗಳಲ್ಲಿ. ಎಂಟು ಒಂಬತ್ತೆನೆಯ ಕ್ಲಾಸಿನಲ್ಲಿ ಪರೀಕ್ಷೆಯ ದಿನವೇ ನೀನು ಭಯಂಕರವಾಗಿ ತೊಂದರೆ ಕೊಡಲು ಆರಂಭಿಸುತ್ತಿದೆ. ನೀನು ಹಾಗೆಯೇ ಇದ್ದರೂ, ಒಸಡು ಹಾಗೂ ಗಲ್ಲಕ್ಕೆ ಬಾವು ಬರಲು ಕಾರಣವಾಗುತ್ತಿದ್ದೆ. ಸುಪುತ್ರನ ಬಾತಿದ ಮುಖವನ್ನು ನೋಡುತ್ತಿದ್ದ ಅಪ್ಪ-ಅಮ್ಮ “ಇರಲಿ ಬಿಡು. ಪರೀಕ್ಷೆ ಮುಂದಿನ ಬಾರಿ ಬರೆದರಾಯಿತು” ಎನ್ನುತ್ತಿದ್ದರು. ಒಂದೆರಡು ದಿನಗಳ ಕಾಲ ನನ್ನನ್ನು ನರಳಿಸಿ ಪರೀಕ್ಷೆ ಮುಗಿಯುತ್ತಿದ್ದ ಹಾಗೆ ಸರಿಯಾಗಿ ಬಿಡುತ್ತಿದ್ದೆ. ಮತ್ತೆ ನಿನ್ನ ಇರುವಿಕೆ ಗೊತ್ತಾಗುತ್ತಿದ್ದುದು ಮುಂದಿನ ಪರೀಕ್ಷೆಯ ವೇಳೆಗೆ!!
ಡಾ. ತ್ರಿವಿಕ್ರಂ ನಿನ್ನನ್ನು ಉಳಿಸಿಕೊಳ್ಳಲು ತುಂಬ ಪ್ರಯತ್ನ ಪಟ್ಟರು. ಮೂರು ಬಾರಿ ರೂಟ್ ಕೆನಾಲ್ ಮಾಡಿದರೂ, ಎಸಿ ಕ್ಲಿನಿಕ್ ನಲ್ಲಿ ಅವರ ಹಣೆಯ ಬೆವರು ಕಿತ್ತು ಬಂತೇ ಹೊರತು ಅವರಿಗೆ ನಿನ್ನ ರೂಟ್ ವರೆಗೆ ತಲುಪಲು ಆಗಲೇ ಇಲ್ಲ. “ಲಿಸನ್, ಐ ಥಿಂಕ್ ಇಟ್ ಇಸ್ ಕಂಪ್ಲೀಟ್ಲಿ ಬ್ಲಾಕ್ಡ್. ದೆರಿಸ್ ನೋ ಪಾಯಿಂಟ್ ಇನ್ ವೇಸ್ಟಿಂಗ್ ಟೈಮ್ ಅಂಡ್ ಮನಿ. ವಿ ವಿಲ್ extract ಇಟ್” ಅಂತ ನಿನಗೆ ಮರಣ ದಂಡನೆ ವಿಧಿಸಿದ್ದರು.
ಹಲ್ಲೇ, ನಿನ್ನ ಸಂಬಂಧ ಕೊನೆಗೊಳ್ಳಲು ನಾನೇ ಕಾರಣ. ಬಹುಷಃ ನಿನ್ನ ಬಗ್ಗೆ ನಾನು ಇನ್ನೂ ಹೆಚ್ಚು ಪ್ರೀತಿಯಿಂದ ನಡೆದುಕೊಂಡಿದ್ದರೆ, ನಮ್ಮಿಬ್ಬರ ಅನುಬಂಧ ಇನ್ನೂ ಕೆಲ ವರ್ಷ ಮುಂದುವರೆಯಬಹುದಿತ್ತೇನೋ.
ನೀನು ನನ್ನಿದ ದೂರವಾಗುತ್ತಿರುವ ಈ ಸಂದರ್ಭದಲ್ಲಿ ನಿನ್ನ ಕೊಡುಗೆಯನ್ನು ಸ್ಮರಿಸುವುದು ನನ್ನ ಕರ್ತವ್ಯ. ಇಷ್ಟು ವರ್ಷಗಳ ಕಾಲ ಹಸಿವು ಹಾಗೂ ಬಾಯಿ ಚಪಲಕ್ಕಾಗಿ ಬಾಯಲ್ಲಿ ತುರುಕಿದ್ದ ಎಲ್ಲವನ್ನೂ ಮರು ಮಾತನಾಡದೇ ಅರೆದಿದ್ದಕ್ಕೆ ಮತ್ತು ಆ ಮೂಲಕ ಅಜೀರ್ಣ ಹಾಗೂ ಮೂಲವ್ಯಾಧಿ ಬರದಂತೆ ನೋಡಿಕೊಂಡದ್ದಕ್ಕೆ ನಿನಗಿದೋ ನಮಸ್ಕಾರ. ನಾನು ನಕ್ಕಾಗಲೆಲ್ಲ ಕೆನ್ನೆಯಲ್ಲಿ ಗುಳಿ ಬೀಳಲು ನಿನ್ನದೇ ಕೊಡುಗೆ ನೀಡಿದ್ದಕ್ಕೆ ನಿನಗಿದೋ ನಮಸ್ಕಾರ. ಕಾಲೇಜಿನ ಲ್ಯಾಬ್ ನಲ್ಲಿ ನನ್ನನ್ನು ಒಳಗೊಳಗೇ ಪ್ರೀತಿಸುತ್ತಿದ್ದ ಹುಡುಗಿ ರಪಕ್ಕನೆ ಎದುರಾಗಿ ಕೆನ್ನೆಗೆ ಬಿಗಿಯಾಗಿ ಮುತ್ತು ಕೊಟ್ಟಾಗ ಗಲ್ಲ ಒಳ ಹೋಗದಂತೆ ತಡೆದ್ದಿದ್ದಕ್ಕೆ ನಿನಗಿದೋ ನಮಸ್ಕಾರ. ಹಾಸ್ಟೆಲ್ ರೂಮ್ ನಲ್ಲಿ ಅಸಂಖ್ಯಾತ ಬಿಯರ್ ಬಾಟಲಿಗಳನ್ನು ಓಪನ್ ಮಾಡಲು ಓಪನರ್ ಬದಲು ನಿನ್ನನ್ನು ಬಳಸಿದ್ದಕ್ಕೆ ಕ್ಷಮೆಯಿರಲಿ!
ಈಗ ನಿನ್ನ ಸ್ಥಳದಲ್ಲಿ ಬ್ರಿಜ್ ಕೂರಿಸುತ್ತಾರಂತೆ. ಈಗ ನಿನ್ನ ಬದಲಿಗೆ ಮೂರು ಹಲ್ಲು ಹಾಕಿಸಿಕೊಳ್ಳಬೇಕು ನಾನು. ಆದರೂ ಇಷ್ಟು ವರ್ಷ ನನ್ನೊಡನಿದ್ದು, ಹೀಗೆ ಬೇರೆಯಾಗಿ ಹೋದೆಯಲ್ಲ, ಐ ಆಮ್ ಸಾರಿ ಹಲ್ಲೇ….
(ವಿಜಯ ಕರ್ನಾಟಕದ ಸಾಪ್ತಾಹಿಕ ವಿಜಯದಲ್ಲಿ ಪ್ರಕಟವಾಗಿದ್ದ ಲೇಖನ)
ಚಿಠ್ಠೀ ಆಯೀ ಹೈ…